ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಎನ್‌ಐಎ ಗೆ ಹಸ್ತಾಂತರ

ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್‌ ಬ್ಲಾಸ್ಟ್‌ ಪ್ರಕರಣ (Bomb Blast Case) ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆಯಾಗಿದೆ.

ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್‌ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್‌ ದಾಖಲಿಸಿದ ಎನ್‌ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ ಎಂದು ವರದಿಯಾಗಿದೆ.

ರಾಮೇಶ್ವರಂ ಕೆಫೆಯ ಬ್ರೂಕ್‌ಫೀಲ್ಡ್ ಔಟ್‌ಲೆಟ್‌ನಲ್ಲಿ ಶುಕ್ರವಾರ (ಮಾರ್ಚ್ 1) ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದ ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ್, ಸ್ಫೋಟದ 40-50 ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.