ಮಲ್ಪೆ ಬೀಚ್‌ನಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ

ಉಡುಪಿ: ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ ಜಿಲ್ಲೆ ಇವರ ವತಿಯಿಂದ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನ ಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಸಲುವಾಗಿ ಮಾರ್ಚ್ 7 ರಿಂದ ಮಾಚ್ 10 ರವರೆಗೆ ನಗರದ ಮಲ್ಪೆ ಬೀಚ್‌ನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನಾ ಸಮಾರಂಭವು ಮಾ. 7 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಮಾರಾಟ ಮೇಳದಲ್ಲಿ ಮಹಿಳೆಯರು ತಯಾರಿಸಿದ ಗೃಹ ಉಪಯೋಗಿ ವಸ್ತುಗಳು, ಕರಕುಶಲ ವಸ್ತುಗಳು, ಟೆರೇಕೋಟಾ ವಸ್ತುಗಳು, ಕೃತಕ ಆಭರಣ, ಆಯುರ್ವೇದಿಕ್ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಪಾಸ್ಟ್ ಫುಡ್ ಇತ್ಯಾದಿ ಉತ್ಪನ್ನಗಳು ಲಭ್ಯವಿದ್ದು, ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುವಂತೆ ಜಿಲ್ಲಾ ಪಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.