ಹರ್ಲೆ‌ ಡೇವಿಡ್ಸನ್ ಎಕ್ಸ್ 440 ಮೋಟಾರ್ ಬೈಕ್ ಗ್ರಾಹಕರಿಗೆ ಹಸ್ತಾಂತರ ಕಾರ್ಯಕ್ರಮ

ಉಡುಪಿ : ಹಿರೋ ಶಕ್ತಿ ಮೋಟಾರ್ಸ್ ,ಹರ್ಲೆ ಡೇವಿಡ್ಸನ್ ವತಿಯಿಂದ ವಿನೂತನ ಮಾದರಿಯ ಹರ್ಲೆ‌ ಡೇವಿಡ್ಸನ್ ಎಕ್ಸ್ 440 ಮೋಟಾರ್ ಬೈಕ್ ಗ್ರಾಹಕರಿಗೆ ಹಸ್ತಾಂತರ ಕಾರ್ಯಕ್ರಮವು ಮಣಿಪಾಲದ ಕಂಟ್ರಿ ಇನ್ ಆ್ಯಂಡ್ ಸೂಟ್ಸ್ ಹೋಟೆಲ್ ನಲ್ಲಿ ನಡೆಯಿತು.

ಹಿರೋ ಶಕ್ತಿ ಮೋಟಾರ್ಸ್ ಮ್ಯಾನೆಜಿಂಗ್ ಡೈರೆಕ್ಟರ್ ವಿಜಯ್ ಕರ್ಣೆ, ರಾಹುಲ್ ಮತ್ತು ಕಂಪನಿಯ ಪ್ರಶಾಂತ್ ಡಿಕೆ ನೂತನ ಮೊಟಾರ್ ಬೈಕ್ ಗಳನ್ನು ಗ್ರಾಹಕರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಒಟ್ಟು 7 ಮಂದಿ ಗ್ರಾಹಕರಿಗೆ ಬೈಕ್ ಗಳನ್ನು ಅತಿಥಿಗಳು ಹಸ್ತಾಂತರಿಸಿದರು.

ಹಾರ್ಲೆ-ಡೇವಿಡ್ಸನ್ X440 ಬೈಕಿನಲ್ಲಿ ಸಿಂಗಲ್-ಸಿಲಿಂಡರ್, ಆಯಿಲ್-ಕೂಲ್ಡ್, 440cc ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಸರಿಸುಮಾರು 27 bhp ಪವರ್ ಮತ್ತು 38 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ 3 ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದ್ದು, ಇದು ಡೆನಿಮ್, ವಿವಿಡ್ ಮತ್ತು ಎಸ್ ಆಗಿದೆ.

ಇದರಲ್ಲಿ ಈ ರೂಪಾಂತರಗಳಲ್ಲಿ, ‘ಡೆನಿಮ್’ ಮೂಲ ರೂಪಾಂತರವಾಗಿದೆ, ಆದರೆ ‘S’ ಟಾಪ್ ರೂಪಾಂತರವಾಗಿದೆ. ಹಾರ್ಲೆ-ಡೇವಿಡ್ಸನ್ ಕಂಪನಿಯ ಅತ್ಯಂತ ಕೈಗೆಟುವ ಬೈಕ್ ಇದಾಗಿದೆ. ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನಲ್ಲಿ ದೊಡ್ಡ ಮಸ್ಕಲರ್ ಫ್ಯೂಯಲ್ ಟ್ಯಾಂಕ್ ಮತ್ತು ನಯವಾದ ಟೇಲ್ ವಿಭಾಗದೊಂದಿಗೆ ಸುಂದರವಾಗಿ ಕಾಣುತ್ತದೆ. ಹೆಚ್ಚುವರಿಯಾಗಿ, ಈ ಬೈಕ್ ನ್ಯೂ-ರೆಟ್ರೊ ಲುಕ್ ನೀಡಲು ವೃತ್ತಾಕಾರದ ವಿನ್ಯಾಸದ ಅಂಶಗಳನ್ನು ಕೂಡಿದೆ. 2023ರ ಹಾರ್ಲೆ-ಡೇವಿಡ್ಸನ್ X440ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಟೈಲ್‌ ಲ್ಯಾಂಪ್‌ಗಳನ್ನು ಒಳಗೊಂಡಿವೆ.

ಇದರೊಂದಿಗೆ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನ LED ಲೈಟಿಂಗ್, ಆಂಬಿಯೆಂಟ್ ಲೈಟ್ ಸೆನ್ಸರ್‌ನೊಂದಿಗೆ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಹೆಚ್ಚಿನ ಫೀಚರ್ಸ್ ಗಳನ್ನು ಹೊಂದಿವೆ. ಇತರ ಗಮನಾರ್ಹ ಫೀಚರ್ಸ್ ಗಳು ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್, ಮ್ಯೂಸಿಕ್ ಕಂಟ್ರೋಲ್ ಮತ್ತು ಗೇರ್ ಸ್ಥಾನವನ್ನು ಪ್ರದರ್ಶಿಸಲಾಗುತ್ತದೆ. ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಮಸ್ಟರ್ಡ್ ಡೆನಿಮ್, ಮೆಟಾಲಿಕ್ ಡಾರ್ಕ್ ಸಿಲ್ವರ್, ಮೆಟಾಲಿಕ್ ಥಿಕ್ ಸಿಲ್ವರ್ ಮತ್ತು ಮ್ಯಾಟ್ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳ ಈ ಬಣ್ಣಗಳಲ್ಲಿ, ಮೊದಲ ಮತ್ತು ಕೊನೆಯ ಬಣ್ಣಗಳು ಕ್ರಮವಾಗಿ ಬೇಸ್ ಮತ್ತು ಟಾಪ್-ಸ್ಪೆಕ್ ಮಾದರಿಗಳಿಗೆ ಪ್ರತ್ಯೇಕಿಸುತ್ತದೆ. ಕೈಗೆಟುಕುವ ಬೆಲೆ ಮತ್ತು ಆಕರ್ಷಕ ವಿನ್ಯಾಸದ ಮೂಲಕ ಈ ಬೈಕ್ ಹೆಚ್ಚಿನ ಗ್ರಾಹಕರನ್ನು ಸೆಳೆಯುತ್ತಿದೆ.