ಕುಂದಾಪುರ: ಇತ್ತೀಚೆಗೆ ಗಂಗೊಳ್ಳಿಯಲ್ಲಿ ನಡೆದ ಬೋಟ್ ಅಗ್ನಿ ದುರಂತ ಹಾಗೂ ಶೀರೂರು ನಾಡದೋಣಿ ದುರಂತದಿಂದ ಸಂತ್ರಸ್ತರಾದ ಮೀನುಗಾರರಿಗೆ ಮೀನುಗಾರಿಕೆ ಇಲಾಖೆ ವತಿಯಿಂದ ಪರಿಹಾರ ವಿತರಣೆ ಹಾಗೂ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಶಾಸಕರಾದ ಯಶಪಾಲ್ ಸುವರ್ಣ ಭಾಗವಹಿಸಿದರು.
ಸಮಾರಂಭವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಾಂಕಾಳ ಎಸ್. ವೈದ್ಯ ಉದ್ಘಾಟಿಸಿದರು.
ಸಮಾರಂಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್, ಅಪರ ಜಿಲ್ಲಾಧಿಕಾರಿಮಮತಾ ದೇವಿ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ಹಾಗೂ ಮೀನುಗಾರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.