ಉಡುಪಿ: ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಡಾ.ಜಿ.ಶಂಕರ್ ಸರ್ಕಾರಿ
ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ನಗರದ ಬ್ರಹ್ಮಗಿರಿಯ ರೆಡ್ಕ್ರಾಸ್ ಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ನಿವೃತ್ತ ರಾಜ್ಯ ಅಧಿಕಾರಿ ಡಾ. ಗಣನಾಥ ಎಕ್ಕಾರು ಮಾತನಾಡಿ, ವಿದ್ಯಾರ್ಥಿ ಜೀವನ ಮುಂದಿನ ಬದುಕಿಗೆ ಪಂಚಾಂಗವಿದ್ದಂತೆ. ಎನ್.ಎಸ್.ಎಸ್. ಚಟುವಟಿಕೆಗಳು ಯುವಜನತೆಯ ಬದುಕನ್ನು ರೂಪಿಸುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ. ಅದರಲ್ಲೂ ವಾರ್ಷಿಕ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ಕೌಶಲ್ಯ ಬೆಳವಣಿಗೆಗೆ ಹೆಚ್ಚು ಪೂರಕವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷ್ಯತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷೆ ಲಕ್ಷ್ಮೀ ಗುರುರಾಜ್, ರೆಡ್ಕ್ರಾಸ್ ಸಂಸ್ಥೆಯ ಖಜಾಂಚಿ ರಮಾದೇವಿ, ಡಾ.ರಾಮದಾಸ ಪ್ರಭು, ಡಾ. ಕೀರ್ತಿ, ಡಾ, ಪ್ರಸಾದ್ ರಾವ್, ಮಹಾಬಲೇಶ್ವರ, ವಾಣಿ ಪೆರಿಯೋಡಿ, ಮೀರ್ ಮಹಮ್ಮದ್ ಗೌಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಎನ್.ಎಸ್.ಎಸ್. ಯೋಜನಾಧಿಕಾರಿ ವಿದ್ಯಾ ಡಿ. ಸ್ವಾಗತಿಸಿದರೆ, ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ ವಂದಿಸಿದರು.