ಕಾರ್ಕಳ: ದೇಶದ ಭದ್ರ ಬುನಾದಿಗೆ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು. ಈ ಬಾರಿ ಅತೀ ಹೆಚ್ಚಿನ ದಾಖಲೆಯ ಮತಗಳಿಂದ ನಮ್ಮ ಅಭ್ಯರ್ಥಿಯನ್ನು ವಿಜಯಿಯಾಗಿಸಬೇಕು. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನಪರ ಯೋಜನೆಗಳನ್ನು, ಅದೇ ರೀತಿ ರಾಜ್ಯ ಸರ್ಕಾರದ ನಿಲುವುಗಳು, ರಾಷ್ಟ್ರ ವಿರೋಧಿ ಮಾನಸಿಕತೆಯನ್ನು, ಅಭಿವೃದ್ಧಿ ಪರ ಇಲ್ಲದ ಚಿಂತನೆಗಳನ್ನು ಮನೆ ಮನೆಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಈ ಬಾರಿ 400 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಲೋಕಸಭೆಗೆ ಕಳುಹಿಸಿ ಮತ್ತೊಮ್ಮೆ ಮೋದಿ ಸರ್ಕಾರ ರಚನೆಯಾಗಬೇಕು ಎಂದು ಶಾಸಕ ವಿ ಸುನಿಲ್ ಕುಮಾರ್ ಹೇಳಿದರು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಪ್ರಮುಖರೊಂದಿಗೆ ಶಾಸಕರ ನಿವಾಸದಲ್ಲಿ ನಡೆದ ಸಭೆಯಲ್ಲಿ ಚುನಾವಣೆಯ ಕಾರ್ಯತಂತ್ರಗಳ ಕುರಿತು ಮುಂದೆ ನಡೆಯಲಿರುವ ಸಭೆ-ಸಮಾವೇಶಗಳು ಹಾಗೂ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಪ್ರಮುಖರಿಗೆ ಮಾಹಿತಿ ನೀಡಿದರು.
ನೂತನ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷದ ಚಟುವಟಿಕೆಗಳನ್ನು ನಡೆಸುತ್ತಾ ಚುನಾವಣೆಯಲ್ಲಿ ಸಕ್ರಿಯರಾಗಿ ಕೆಲಸ ಮಾಡಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಅತಿ ಹೆಚ್ಚಿನ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದರು.
ಮಣಿರಾಜ್ ಶೆಟ್ಟಿ ಹಾಗೂ ಕೆ.ಪಿ.ಶೆಣೈ ಮಾತನಾಡಿ, ಕೇಂದ್ರ ಸರ್ಕಾರವು ಬಹಳಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅದನ್ನು ಪಕ್ಷದ ಕಾರ್ಯಕರ್ತರು ಜನರಿಗೆ ಮನದಟ್ಟು ಮಾಡಿ ಮತಯಾಚನೆ ಮಾಡಬೇಕು ಎಂದು ಎಲ್ಲರನ್ನು ಹುರಿದುಂಬಿಸಿದರು.
ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಿಲ್ಲಾ ವಕ್ತಾರ ಸತೀಶ ಶೆಟ್ಟಿ ಮುಟ್ಲುಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಸಾಲ್ಯಾನ್, ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿವಪುರ, ಸತೀಶ್ ಬೋಳ ಹಾಗೂ ವಿವಿಧ ಮೋರ್ಚಾಗಳ ಪ್ರಮುಖರು, ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಕಾರ್ಯದರ್ಶಿ ಹರ್ಷವರ್ಧನ್ ಕಾರ್ಯಕ್ರಮ ನಿರೂಪಿಸಿದರು.