ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ

ಥಿಂಪು: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ’ ಗೌರವವನ್ನು ಸ್ವೀಕರಿಸಿದ್ದಾರೆ. ಅವರು ಈ ಗೌರವವನ್ನು ಸ್ವೀಕರಿಸಿದ ಮೊದಲ ವಿದೇಶಿ ಪ್ರಧಾನಿಯಾಗಿದ್ದಾರೆ.

ಭಾರತ-ಭೂತಾನ್ ಸಂಬಂಧಗಳ ಬೆಳವಣಿಗೆಗೆ ನೀಡಿದ ಮಹೋನ್ನತ ಕೊಡುಗೆ ಮತ್ತು ಭೂತಾನ್ ರಾಷ್ಟ್ರ ಮತ್ತು ಜನರಿಗೆ ವಿಶಿಷ್ಟ ಸೇವೆಗಾಗಿ ಪ್ರಧಾನಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಭೂತಾನ್‌ನಿಂದ ‘ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ನಾನು ಅದನ್ನು 140 ಕೋಟಿ ಭಾರತೀಯರಿಗೆ ಅರ್ಪಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭೂತಾನ್‌ನ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಪ್ರಧಾನಿ ಮೋದಿ ಅವರಿಗೆ ‘ಆರ್ಡರ್ ಆಫ್ ದಿ ಡ್ರುಕ್ ಗ್ಲ್ಯಾಲ್ಪೋ’ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.