ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆ ನಡೆಸುತ್ತಿತ್ತು. ಅಲ್ಲದೇ ಇದರಿಂದಾಗಿ ರಾಜ್ಯದ ವಿವಿಧೆಡೆ ಕೋಮುಗಲಭೆಯು ಸೃಷ್ಟಿಯಾಗಿತ್ತು. ಹೀಗಾಗಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಮಂಗಳವಾರ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.












