ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.
ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆ ಕಳೆದ ಒಂದು ವರ್ಷದ ಹಿಂದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು.
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಹೊಸ ಅಧ್ಯಕ್ಷರನ್ನು ಘೋಷಣೆ ಮಾಡಿದ್ದು, ನೂತನ ಅಧ್ಯಕ್ಷರು ಪಕ್ಷವನ್ನು ಸಂಘಟಿಸಿ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ.