ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ‌ ಆಕಸ್ಮಿಕ‌ ಬೆಂಕಿ..!

ಮಂಗಳೂರು: ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳೂರಿನ ಕೊಡಿಯಾಲ್ ಬೈಲು ಪ್ರದೇಶದ ಜೈಲು ರಸ್ತೆಯ ಸಮೀಪ ನಡೆದಿದೆ.
ಕಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲೇ ಅದರ ಇಂಜಿನ್ ಭಾಗದಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಕಿಡಿ ಮತ್ತು ಹೊಗೆ ಕಾಣಿಸಿಕೊಂಡ ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ಅದರ ಮಾಲಕ ತಕ್ಷಣವೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಿಂದ ಕೆಳಗೆ ಇಳಿದಿದ್ದಾರೆ.
ಇದರಿಂದಾಗಿ ಸಂಭವಿಸಬಹುದಾಗಿದ್ದ ಅಪಾಯವೊಂದು ತಪ್ಪಿದೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರಿಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸಿದರು. ಕಾರಿನ ಎ.ಸಿ.ಯನ್ನು ದುರಸ್ತಿಪಡಿಸಿ ತರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.