ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಸಾಮಾಜಿಕ ಕಾರ್ಯಕರ್ತ ಇಂದು ದಿನಾಂಕ 19-04-2023 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಕಾರ್ಯದರ್ಶಿಗಳಾದ ಕೇಸರಿ ಯುವರಾಜ್, ವಕ್ತಾರರಾದ ನವೀನ್ ಎಸ್.ಕೆ, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಕೃಷ್ಣ ರಾವ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ ಉಪಸ್ಥಿತರಿದ್ದರು.