ಗಣಿತನಗರ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಹಲವಾರು ವರ್ಷಗಳಿಂದ 5 ರಿಂದ 10ನೇ ತರಗತಿಯವರೆಗೆ ಪ್ರತೀ ತರಗತಿಗೆ 5 ವಿದ್ಯಾರ್ಥಿಗಳಂತೆ ಉಚಿತ ಶಿಕ್ಷಣವನ್ನು ಸ್ಥಳೀಯ ಬಡ ಅರ್ಹ ಮಕ್ಕಳಿಗೆ ನೀಡಲಾಗುತ್ತಿದ್ದು, ಕಳೆದ ಶೈಕ್ಷಣಿಕ ವರ್ಷದಿಂದ ಈ ಉಚಿತ ಶಿಕ್ಷಣವನ್ನು ಕಾಲೇಜು ವಿಭಾಗದಲ್ಲಿ ವಾಣಿಜ್ಯ ವಿಭಾಗಕ್ಕೂ ವಿಸ್ತರಿಸಲಾಗಿದೆ.
ಪ್ರಸ್ತುತ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಇಕೋನಾಮಿಕ್ಸ್, ಬಿಸಿನೆಸ್ ಸ್ಟಡಿಸ್, ಎಕೌಂಟೆನ್ಸಿ ಮತ್ತು ಸ್ಟ್ಯಾಟಿಸ್ಟಿಕ್ಸ್ ಅಥವಾ ಇಕೋನಾಮಿಕ್ಸ್, ಬಿಸಿನೆಸ್ ಸ್ಟಡಿಸ್, ಎಕೌಂಟೆನ್ಸಿ ಮತ್ತು ಕಂಪ್ಯೂಟರ್ ಸೈನ್ಸ್ ಸಂಯೋಜನೆಯಿದ್ದು, 2024-25ನೇ ಶೈಕ್ಷಣಿಕ ಸಾಲಿಗೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಸಿ.ಬಿಎಸ್.ಇ / ಐ.ಸಿ.ಎಸ್.ಇ ಬೋರ್ಡ್ನಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ಸ್ಥಳೀಯ ವಿದ್ಯಾರ್ಥಿಗಳು ಈ ಉಚಿತ ಶಿಕ್ಷಣದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೇಲಿನ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅಥವಾ ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ನೊಂದಾಯಿಸಿಕೊಳ್ಳಬಹುದಾಗಿದೆ.