ಮಂಗಳೂರು: ಸಂಗೀತ ಭಾರತಿ ಪ್ರತಿಷ್ಠಾನ (ರಿ), ಮಂಗಳೂರು ಇವರ ಆಶ್ರಯದಲ್ಲಿ ಇದೇ ಬರುವ ಮೇ 19 ರಂದು ಸಂಜೆ 5.30 ಗಂಟೆಗೆ ‘ಸ್ವರ ಸಂಧ್ಯಾ’ ಶಾಸ್ತ್ರೀಯ ಹಿಂದೂಸ್ತಾನೀ ಸಂಗೀತ ಜುಗಲ್ ಬಂಧಿ ಕಾರ್ಯಕ್ರಮವನ್ನು ಮಂಗಳೂರು ನಗರದ ಫಾದರ್ ಎಲ್ಎಫ್ ರಾಸ್ಕ್ವಿನ್ಹಾ ಹಾಲ್, ಎಲ್ಸಿಆರ್ಐ ಬ್ಲಾಕ್ ಸೇಂಟ್ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಪೂರ್ವಾಧದಲ್ಲಿ ರಾಷ್ಟ್ರಮಟ್ಟದ ಖ್ಯಾತಿಯ ಕಲಾವಿದರಾದ ದೆಹಲಿಯ ಖ್ಯಾತ ಪಿಟೀಲು ವಾದಕ ಪಂಡಿತ್ ಸಂತೋಷ್ ಕುಮಾರ್ ನಹರ್ ಇವರಿಂದ ವಯೋಲಿನ್ ಕಾರ್ಯಕ್ರಮ ನಡೆಯಲಿದ್ದು, ಉತ್ತರಾರ್ಧದಲ್ಲಿ ಶಿವಮೊಗ್ಗದ ನೌಶಾದ್ ಹರ್ಲಾಪುರ್ ಮತ್ತು ನಿಶಾದ್ ಹರ್ಲಾಪುರ್ ಇವರಿಂದ ಹಿಂದೂಸ್ತಾನೀ ಶಾಸ್ತ್ರೀಯ ಸಂಗೀತ ಜುಗಲ್ ಬಂಧಿ ಗಾಯನ ಕಾರ್ಯಕ್ರಮ ನಡೆಯಲಿದೆ. ತಬ್ಲಾದಲ್ಲಿ ಶ್ರೀ ರಾಜೇಂದ್ರ ನಾಕೋಡ್, ಶ್ರೀ ಶ್ರೀಧರ್ ಭಟ್, ಶ್ರೀ ಗುರುರಾಜ್ ಅಡುಕಳ ಇವರು ಸಾಥ್ ನೀಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಂಗೀತಾಸಕ್ತರೆಲ್ಲರಿಗೂ ಮುಕ್ತ ಪ್ರವೇಶಾವಕಾಶವಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಉಪಾಧ್ಯಕ್ಷ ಶ್ರೀ ನರೇಂದ್ರ ಎಲ್. ನಾಯಕ್ ರವರು ಕೋರಿದ್ದಾರೆ.