ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಹಾವಂಜೆ ಗ್ರಾಮದ ಪರಾರಿಮಠ ಬಳಿ ಬಾವಿಗೆ ಬಿದ್ದ ಚೆಂಡನ್ನು ತೆಗೆಯುವಾಗ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.
ಮೃತಪಟ್ಟವರು ದೀಪಕ್ (58) ಎಂದು ತಿಳಿದು ಬಂದಿದೆ.
ಅವರು ಮಕ್ಕಳೊಂದಿಗೆ ಕ್ರಿಕೆಟ್ ಆಡುವಾಗ ಚೆಂಡು ಸಮೀಪದ ಬಾವಿಗೆ ಬಿದ್ದಿತ್ತು. ಆಗ ಚೆಂಡನ್ನು ಬಾವಿಯಿಂದ ಹೊರಗೆ ತೆಗೆಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ.












