ಉಡುಪಿ: ಕೆಎಸ್ಆರ್ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸರ್ಕಲ್ನಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕೋಟತಟ್ಟು ಕಲ್ಮಾಡಿ ರಸ್ತೆಯ ವಾಸುದೇವ ಗಾಣಿಗ (33) ಎಂದು ಗುರುತಿಸಲಾಗಿದೆ.
ವಾಸುದೇವ ರಾತ್ರಿ ಸುಮಾರು 12 ಗಂಟೆಗೆ ತೆಕ್ಕಟ್ಟೆ ಸಾಯಿಗ್ರಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದರು. ಅವರು ಕೋಟ ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಶಿರಸಿ ಕಡೆ ಹೋಗುವ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ವಾಸುದೇವ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.