ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
55 ವರ್ಷದ ಮಂಜು ಯಾನೆ ಮಂಜುನಾಥ, ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಈತನನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರದ ಸಾಯಿಬರಕಟ್ಟೆ ಎಂಬಲ್ಲಿ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸರು ತಿಳಿದ್ದಾರೆ.