ಮಣಿಪಾಲ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸುಧಾರಿತ ಯೂರೋಡೈನಾಮಿಕ್ ಪ್ರಯೋಗಾಲಯವನ್ನು ಗದಗ ಕ್ಷೇತ್ರದ ಶಾಸಕರಾದ ಹೆಚ್.ಕೆ. ಪಾಟೀಲರು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಭಾರತವು ಮಣಿಪಾಲದ ಬಗ್ಗೆ ಹೆಮ್ಮೆಪಡುತ್ತದೆ, ಏಕೆಂದರೆ ವಿಶ್ವದಾದ್ಯಂತ 500ರೊಳಗೆ ಸ್ಥಾನ ಪಡೆದಿರುವ ಏಕೈಕ ವಿಶ್ವವಿದ್ಯಾಲಯ ಮಾಹೆ ಮಣಿಪಾಲ ಆಗಿದೆ. ಆರೋಗ್ಯ ಮತ್ತು ಗುಣಮಟ್ಟದ ಚಿಕಿತ್ಸೆಯಲ್ಲಿ ಮಣಿಪಾಲ ತನ್ನ ಶ್ರೇಷ್ಠತೆಗೆ ಹೆಸರುವಾಸಿಯಾಗಿದೆ” ಎಂದರು.
ಮಣಿಪಾಲ ಮಾಹೆಯ ಸಹ ಕುಲಾಧಿಪತಿಗಳಾದ ಡಾ. ಹೆಚ್. ಎಸ್. ಬಲ್ಲಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಹೆ ಮಣಿಪಾಲದ ಉಪಕುಲಪತಿ ಡಾ. ವಿನೋದ ಭಟ್ ಮತ್ತು ಸಹ ಉಪಕುಲಪತಿ ಡಾ. ಪೂರ್ಣಿಮಾ ಬಾಳಿಗಾರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು
. ಕೆಎಂಸಿ ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ, ಕಸ್ತೂರ್ಬಾ ಆಸ್ಪತ್ರೆಯ ಮೂತ್ರಶಾಸ್ತ್ರ ಮತ್ತು ಮೂತ್ರಪಿಂಡ ಕಸಿ ವಿಭಾಗದ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಅರುಣ ಚಾವ್ಲಾ ಉಪಸ್ಥಿತರಿದ್ದರು.
ಕೆಎಂಸಿಯ ಡೀನ್ ಡಾ. ಶರತ್ ಕೆ ರಾವ್ ಸ್ವಾಗತಿಸಿದರು. ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿಯ ವಂದಿಸಿದರು.