ಮಂಗಳೂರು: ಬರೋಡಾ ಬ್ಯಾಂಕ್ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜನರಲ್ ಮ್ಯಾನೇಜರ್ ಮತ್ತು ವಲಯ ಮುಖ್ಯಸ್ಥರಾದ ಶ್ರೀ ರಾಜೇಶ್ ಖನ್ನಾ ಉದ್ಘಾಟಿಸಿ ಮಾತನಾಡಿ, ವ್ಯಕ್ತಿಯ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಯೋಗದ ಮಹತ್ವದ ಕುರಿತು ಮಾತನಾಡಿದರು. ಶ್ರೀಮತಿ ದೇವಿಕಾ ಪುರುಷೋತ್ತಮ್, ರಾಷ್ಟ್ರೀಯ ಮಟ್ಟದ ಯೋಗ ಶಿಕ್ಷಕಿ ಮತ್ತು ರೆಫ್ರಿ ಇವರು ಯೋಗ ಅಧಿವೇಶನವನ್ನು ಮುನ್ನಡೆಸಿದರು. ಶ್ರೀ ಅಶ್ವಿನಿ ಕುಮಾರ್, ಡಿಜಿಎಂ-ವ್ಯವಹಾರ ಅಭಿವೃದ್ಧಿ, ಶ್ರೀ ಸನಿಲ್ ಕುಮಾರ್, ಆರ್ಎಂ-ಮಂಗಳೂರು ನಗರ, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.