ಕೊಲ್ಲೂರು: ಗುಡ್ಡ ಕುಸಿದು ಮಹಿಳೆ ಸ್ಥಳದಲ್ಲೇ ಮೃತ್ಯು.

ಉಡುಪಿ: ಮನೆಯ ಎದುರಿನ ಗುಡ್ಡ ಕುಸಿದುಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿದ ಮಹಿಳೆಯೋರ್ವರು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಇಂದು ನಡೆದಿದೆ.

ಕೊಲ್ಲೂರು ಗ್ರಾಮದ ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟ ಮಹಿಳೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಗಾಳಿಮಳೆಗೆ ಮನೆಯ ಎದುರಿನ ಗುಡ್ಡ ಕುಸಿದಿದ್ದು, ಮಣ್ಣಿನ ಅಡಿ ಸಿಲುಕಿದ ಅಂಬಾ ಅವರು ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತದೇಹವನ್ನು ಮೇಲಕ್ಕೆತ್ತಲಾಯಿತು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.