ಮಣಿಪಾಲ: ನ.4 ರಂದು ಎಂಜಿಎಂ ಕಾಲೇಜಿನ ಗೀತಾಂಜಲಿ ಹಾಲ್ ನಲ್ಲಿ ಬೆಳಗ್ಗೆ 10 ಗಂಟೆಗೆ ಮಣಿಪಾಲ್ ಮಹಿಳಾ ಸಮಾಜದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮ ಉದ್ಘಾಟನೆ.
ಮಣಿಪಾಲ್ ಮಹಿಳಾ ಸಮಾಜದ ಅಧ್ಯಕ್ಷೆ ಡಾ. ಗಿರಿಜಾ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಗೌರವ ಅತಿಥಿಗಳಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎಂಜಿಎಂ ಕಾಲೇಜಿನ ಪ್ರಾಶುಂಪಾಲ ಪ್ರೊ.ಲಕ್ಷ್ಮೀ ನಾರಾಯಣ ಕಾರಂತ್, ಆದರ್ಶ್ ಆಸ್ಪತ್ರೆಯ ನಿರ್ದೇಶಕಿ ವಿಮಲಾ ಚಂದ್ರಶೇಖರ್ ಭಾಗವಹಿಸಲಿದ್ದಾರೆ.
ನ.5 ರಂದು ಸಂಜೆ 6.30 ರಿಂದ ಸಮಾರೋಪ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಯಶ್ ಪಾಲ್ ಸುವರ್ಣ, ಗೌರವ ಅತಿಥಿಗಳಾಗಿ ಕಂಚನಾ ಆಟೋಮೊಬೈಲ್ಸ್ ನ ನಿರ್ದೇಶಕ ಪ್ರಸಾದ್ ರಾಜ್ ಕಾಂಚನ್, ಜಿ.ಶಂಕರ್ ಫ್ಯಾಮಿಲ್ ಟ್ರಸ್ಟ್ ನ ಶಾಲಿನಿ ಜಿ ಶಂಕರ್, ಐಎಂಎ ಅಧ್ಯಕ್ಷೆ ಡಾ ರಾಜಲಕ್ಷ್ಮಿ ಭಾಗವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಣಿಪಾಲ್ ಮಹಿಳಾ ಸಮಾಜದ ಆಡಳಿತ ಮಂಡಳಿ ಸದಸ್ಯೆ ಶೈಲಾ ಶ್ರೀನಿವಾಸ್ ರಾವ್ ವಹಿಸಲಿದ್ದಾರೆ.
ಮಣಿಪಾಲ್ ಮಹಿಳಾ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.