ಜೂನ್ 21ರಂದು ಬಿ.ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನಾ ಸಮಾರಂಭ.

ಕಾರ್ಕಳ: ಭಾರತೀಯ ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಭಾರತೀಯ ಆಡಳಿತ ಸೇವೆ (ಐಎಎಸ್) ಪಡೆದು ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ ಹಾಗೂ ಕೆಎಸ್‌ಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವು ಜೂನ್ 21ರಂದು ಭಾನುವಾರ ಸಂಜೆ 4 ಗಂಟೆಗೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಲಕ್ಷ್ಮೀಪುರದಲ್ಲಿರುವ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಸಮಾರಂಭಕ್ಕೂ ಮುನ್ನ ಮಧ್ಯಾಹ್ನ 2.30ರಿಂದ “ಶಕ್ತಿಯುತ ವ್ಯಕ್ತಿಯ ಹಿಂದೆ; ಶಕ್ತಿಯುತ ಮನಸ್ಸು” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಲಿದ್ದು, ಬೆಂಗಳೂರಿನ ಗ್ರೇಸ್ ಅಕಾಡೆಮಿಯ ಜೀವನ್ ವಿಜ್ಞಾನ ತರಬೇತುದಾರ ಸುಬ್ರಹ್ಮಣ್ಯ ಕುಳೇದು ಉಪನ್ಯಾಸ ನೀಡಲಿದ್ದಾರೆ.

ಅಭಿನಂದನಾ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಕಳದ ಭುವನೇಂದ್ರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ವೈ. ಪಾಂಡುರಂಗ ನಾಯಕ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಲಿ. ಮಂಗಳೂರು ಅಧ್ಯಕ್ಷರು ಹಾಗೂ ಸರಸ್ವತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪುತ್ತೂರು ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್, ಕರ್ನಾಟಕ ಸರ್ಕಾರದ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಉಪಸ್ಥಿತರಿರುವರು.
ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದು, ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಚೇತನ್ ನಾಯಕ್ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.