ಕಲ್ಸಂಕ ಟ್ರಾಫಿಕ್ ಮಧ್ಯೆ ನಿಂತಿದ್ದ ಅಂಬ್ಯುಲೆನ್ಸ್ ನಲ್ಲಿ ಧಿಢೀರ್ ಬೆಂಕಿ: ಆತಂಕ ಸೃಷ್ಟಿ

ಉಡುಪಿ: ಉಡುಪಿ ನಗರದ ಕಲ್ಸಂಕ ಸಮೀಪ ಮುಖ್ಯ ರಸ್ತೆಯಲ್ಲಿ ಅಂಬ್ಯುಲೆನ್ಸ್ ವಾಹನದಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಸಿಟಿ ಬಸ್ಟ್ಯಾಂಡ್ ಕಲ್ಸಂಕ ರಸ್ತೆಯಲ್ಲಿ ಎಂದಿನಂತೆ ಟ್ರಾಫಿಕ್ ಜಾಮ್ ಆಗಿದ್ದು, ಈ ಮಧ್ಯೆ ಟ್ರಾಫಿಕ್ ನಲ್ಲಿ ನಿಂತಿದ್ದ ಅಂಬ್ಯುಲೆನ್ಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಟ್ರಾಫಿಕ್ ಪೊಲೀಸರು, ಸಾರ್ವಜನಿಕರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.

ಬಳಿಕ ಆಗ್ನಿಶಮಾಕ‌ ದಳಕ್ಕೆ ಮಾಹಿತಿ ನೀಡಿದ್ದು, ಕೆಲವೇ ಕ್ಷಣಗಳಲ್ಲಿ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಬೆಂಕಿ ಹತ್ತಿಕೊಂಡ ಪರಿಣಾಮ ದಟ್ಟವಾದ ಹೊಗೆ ಹಬ್ಬಿತ್ತು.