ಮಂಗಳೂರು: ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲಿ ದೂರದಲ್ಲಿ ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿದ್ದ ತಮಿಳುನಾಡಿನ 10 ಮೀನುಗಾರರನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ ಲಾರ್ಡ್ ಆಫ್ ದಿ ಓಷಿಯನ್ ಬೋಟ್ ಎಂಜಿನ್ ಸಮಸ್ಯೆಯಿಂದ ಸಮುದ್ರ ಮಧ್ಯೆ ಸಿಲುಕಿಕೊಂಡಿತ್ತು. ಕೂಡಲೇ ಮಾಹಿತಿ ಪಡೆದ ಕರಾವಳಿ ಕಾವಲು ಪಡೆ, ಐಸಿಜಿ ರಾಜದೂತ್ ಹಡಗನ್ನು ಸ್ಥಳಕ್ಕೆ ಕಳುಹಿಸಿತ್ತು.
ರಾಜದೂತ್ ಹಡಗಿನ ಮೂಲಕ ಸಮುದ್ರದಲ್ಲಿ ಸಿಲುಕಿದ್ದ ಬೋಟ್ ಹಾಗೂ ಅದರಲ್ಲಿದ್ದ 10 ಜನ ಮೀನುಗಾರರನ್ನು ಸುರಕ್ಷಿತವಾಗಿ ದಡಕ್ಕೆ ತರಲಾಗಿದೆ ಎಂದು ತಿಳಿದುಬಂದಿದೆ.












