ಕೃತಿಕಾ(3) ಮೃತ ಬಾಲಕಿ ಮಂಗಳವಾರ ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಅಜ್ಜಿ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಾಲಕಿ ನೀರಿನಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.