ತ್ಯಾಜ ವಿಲೇವಾರಿಗಾಗಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 47.50 ಕೋಟಿ ರೂಪಾಯಿ ಅನುದಾನ ಮಂಜೂರು: ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಸ್ವಚ್ಛ ಭಾರತ್‌ ಅಭಿಯಾನ 2.0 ರ ಅಡಿಯಲ್ಲಿ ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಾರಂಪರಿಕ ತ್ಯಾಜ್ಯದ ವಿಲೇವಾರಿಗಾಗಿ 47.50 ಕೋಟಿ ರೂಪಾಯಿ ಅನುದಾನವನ್ನು ಮಂಜೂರುಗೊಳಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ನಗರ ಸಭೆ ವ್ಯಾಪ್ತಿಯ ದ್ರವ ತ್ಯಾಜ್ಯ ನಿರ್ವಹಣೆ ಮೇಲ್ದರ್ಜೆಗೇರಿಸಲು ಭಾರತ ಸರ್ಕಾರದ ನಗರ ವ್ಯವಹಾರಗಳ ಇಲಾಖೆಯು ಎನ್.ಜಿ.ಟಿ ನಿಧಿಯ ಮೂಲಕ 30 ಕೋಟಿ ರೂಪಾಯಿ ಹಾಗೂ ಘನ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸಿದ್ಧಪಡಿಸಿದ್ದ 13 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಅನುಮತಿ ನೀಡಿ ಮಂಜೂರಾತಿ ನೀಡಿದೆ, ಹಾಗೂ ಎಲ್ಲಾ ತರಹದ ಘನ ತ್ಯಾಜ್ಯಗಳನ್ನು ನಿರ್ವಹಣೆ ಮಾಡಲು ಎಂ.ಆರ್.ಎಫ್ (Material Recovery Facility) ಕೇಂದ್ರವನ್ನು ಸ್ಥಾಪಿಸಲು 4.5 ಕೋಟಿ ರೂಪಾಯಿ ಮಂಜೂರುಗೊಳಿಸಿದೆ. ಈ ಮೂಲಕ ನಗರದ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವಿಶೇಷ ಒತ್ತನ್ನು ನೀಡಿದೆ.

ಉಡುಪಿ ಜಿಲ್ಲೆಗೆ ಈ ವಿಶೇಷ ಅನುದಾನವನ್ನು ನೀಡಿ ಸಹಕರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೂ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಹರಿದೀಪ್‌ ಸಿಂಗ್‌ ಪುರಿಯವರಿಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣೆ ಉದ್ದಿಮೆ ರಾಜ್ಯ ಖಾತೆ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಅಭಿನಂದನೆ ಸಲ್ಲಿಸಿದ್ದಾರೆ.