ಉಡುಪಿ: ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆ. 5 ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಉದ್ಯೋಗ ಮೇಳದಲ್ಲಿ 20 ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಗ್ರಾಮೀಣ ಭಾಗದ ಯುವಕ-ಯುವತಿಯರಿಗೆ ಉದ್ಯೋಗ ಪಡೆಯಲು ಉತ್ತಮ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಉದ್ಯೋಗಮೇಳದಲ್ಲಿ ಭಾಗವಹಿಸಲು ನೋಂದಣಿ ಉಚಿತವಾಗಿದ್ದು, ಕಡ್ಡಾಯವಾಗಿ ನೋಂದಣಿ ಆಗತಕ್ಕದ್ದು ಎಂದು ಅವರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕಿ ಮಮತಾ, ಪ್ರಾಂಶುಪಾಲೆ ಡಾ. ಸೀಮಾ ಭಟ್, ವಾಣಿಜ್ಯ ಉಪನ್ಯಾಸಕಿ ಸ್ವಾತಿ, ಏವಿಯೇಶನ್ ವಿಭಾಗದ ಉಪನ್ಯಾಸಕಿ ಸವಿತಾ, ಮಾರ್ಕೆಟಿಂಗ್ ವಿಭಾಗದ ಉಪನ್ಯಾಸಕಿ ವೈಷ್ಣವಿ ಉಪಸ್ಥಿತರಿದ್ದರು.