ಸೌಜನ್ಯ ಪ್ರಕರಣ ಮರುತನಿಖೆಗೆ ಒತ್ತಾಯಿಸಿ ಪ್ರಧಾನಿಗೆ ಪತ್ರ

ಹಿರೇಬೆಟ್ಟು: ಸೌಜನ್ಯ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಹಲವಾರು ಸಮಯದಿಂದ ಹೋರಾಟ ನಡೆಯುತ್ತಿದ್ದು, ಹಿರೇಬೆಟ್ಟು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ ಹಾಗೂ ಸೌಜನ್ಯ ತಾಯಿ ಸಭೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವಂತೆ ಮತ್ತು ಧರ್ಮಸ್ಥಳ ಪರಿಸರದಲ್ಲಿ ಇದುವರೆಗೆ ನಡೆದ ಎಲ್ಲಾ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ವಿಸ್ತೃತ ತನಿಖೆ ನಡೆಸುವಂತೆ ಮನವಿ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯಲಾಗಿದೆ.