ಆದರ್ಶ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನ ಅಂಗವಾಗಿ ಮೆಗಾ ರ‍್ಯಾಲಿ

ಉಡುಪಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಮತ್ತು ಜಿಲ್ಲಾ ಸರ್ವೇಕ್ಷಣಾ ಕಚೇರಿ ಉಡುಪಿ ಯ ಸಹಯೋಗದೊಂದಿಗೆ ಆದರ್ಶ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನ-2022 ರ ಅಂಗವಾಗಿ ಮೆಗಾ ರ‍್ಯಾಲಿಯು ಶನಿವಾರದಂದು ಬೆಳಗ್ಗೆ ನಡೆಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.