ಬೆಂಗಳೂರು: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಈಕೆಯನ್ನು ಪ್ರಿಯತಮ ಕೊಲೆ ಮಾಡಿ ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಅಂಗನವಾಡಿ ಟೀಚರ್ ಸಿದ್ದಾಪುರದ ಕಮಲಾ ಎಂದು ಗುರುತಿಸಲಾಗಿದೆ. ಈಕೆಯನ್ನು ಪ್ರಿಯಕರ ದಿಲೀಪ್ ಎಂಬಾತ ಕಲಾಸಿಪಾಳ್ಯದ ಅರ್ಚನಾ ಲಾಡ್ಜ್ ಗೆ ಕರೆದುಕೊಂಡು ಬಂದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿ ದಿಲೀಪ್ ಲಾಡ್ಜ್ ನಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.