ಉಡುಪಿಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗುರುವಾರದಂದು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತ್ರಿವಳಿ ಮಕ್ಕಳು ಮತ್ತು ತಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಉ.ಕ ಜಿಲ್ಲೆಯ ಅಂಕೋಲಾ ನಿವಾಸಿ ಸುನಿತಾ (27) ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ.

ಡಾ.ಕವಿಷಾ ಭಟ್, ಡಾ ರಜನಿ ಕಾರಂತ್, ಡಾ ಸೂರ್ಯನಾರಾಯಣ್, ಡಾ.ಗಣಪತಿ ಹೆಗಡೆ ಹಾಗೂ ಡಾ. ಮಹಾದೇವ ಭಟ್ ಅವರನ್ನು ಒಳಗೊಂಡ ತಜ್ಞ ವೈದ್ಯರ ತಂಡವು ಯಶಸ್ವಿಯಾಗಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಾರೆ. ತಾಯಿ ಮತ್ತು ತ್ರಿವಳಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.