ಉಡುಪಿ:ಸರ್ವಿಸ್ ಬಸ್ ನಿಲ್ದಾಣದಲ್ಲಿ ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು, ಸಾರ್ವಜನಿಕರ ಸಹಕಾರದೊಂದಿಗೆ ರಕ್ಷಿಸಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ವ್ಯಕ್ತಿಯು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಹೆಸರು ಕೃಷ್ಣ, 55 ವರ್ಷ, ಹಿರಿಯಡಕ ಸಮೀಪದ ನಿವಾಸಿಯೆಂದು ತಿಳಿದುಬಂದಿದೆ. ಸಂಬಂಧಿಕರು ಕೂಡಲೇ ಜಿಲ್ಲಾ ಆಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ