ಉಡುಪಿ: ಇಲ್ಲಿನ ಹೋಟೆಲ್ ಒಂದರಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ 53 ವರ್ಷದ ವ್ಯಕ್ತಿಯೊಬ್ಬರು ಮಿಷನ್ ಕಾಂಪೌಂಡ್ ಬಳಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಇಗ್ನೇಷಿಯಸ್ ಮಾರ್ಕ್ ಸಲ್ಡಾನ್ಹಾ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಹೊಟೇಲ್ ಒಂದರಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಇವರು ವೈಯಕ್ತಿಕ ಸಮಸ್ಯೆಗಳಿಂದಾಗಿ ಜೀವನದಲ್ಲಿ ನೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.