ಉಡುಪಿ: ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಚಿಟ್ಪಾಡಿ ನಿವಾಸಿ ಸ್ವಾತಿ ಮಾಲ್ತೇಶ್ ಮಾನೆ (20) ಎಂಬ ಯುವತಿಯು ಜನವರಿ 16 ರಂದು ಮನೆಯಿಂದ ಹೊರೆಗ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.