ಉಡುಪಿ: ಯುವಕ ನಾಪತ್ತೆ

ಉಡುಪಿ: ಮೆಕಾನಿಕಲ್ ಎಂಜಿನಿಯರಿಂಗ್ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದ ಆಯುಷ್ (22) ಎಂಬ
ಯುವಕ ಜೂನ್ 24 ರಂದು ತನ್ನ ತಂದೆಯೊಂದಿಗೆ ಜಿಲ್ಲಾಸ್ಪತ್ರೆಗೆ ತೆರಳಿದ್ದು, ಬೆಳಗ್ಗೆ 11.30 ರ ನಂತರ ಆಸ್ಪತ್ರೆಯಿಂದ ವಾಪಾಸು ಮನೆಗೂ ಬಾರದೆ, ಮೊಬೈಲ್ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗಿರುತ್ತಾರೆ.

175 ಸೆಂಮೀ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.