ಉಡುಪಿ: ಪಡುಬೆಳ್ಳೆಯ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆ ಪಡುಬೆಳ್ಳೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರಕ್ಷಕ–ಶಿಕ್ಷಕ ಸಂಘದ ಸಹಯೋಗದಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ ನಡೆಯಿತು.
ಕಾರ್ಕಳ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ವಂದನಾ ರೈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಹಾರ ವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಮನೆಯ ಹಿರಿಯರ ಕರ್ತವ್ಯವಾಗಿದೆ ಎಂದು ಹೇಳಿದರು. ಬಳಿಕ ಮಕ್ಕಳನ್ನು ನೃತ್ಯದ ಮೂಲಕ ರಂಜಿಸಿದರು.

ಕಾರ್ಯಕ್ರಮದಲ್ಲಿ ಹಳೆಯ ಕಾಲದಲ್ಲಿ ಬಳಕೆಯಾಗುತ್ತಿದ್ದ ವಿವಿಧ ಸಲಕರಣೆಗಳ ಪ್ರಾತ್ಯಕ್ಷಿಕೆ ಹಾಗೂ ವಿವಿಧ ಗಿಡಮೂಲಿಕೆ ಸಸ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಅತಿಥಿಗಳೊಂದಿಗೆ ಸೇರಿ ಹುಲಿಕುಣಿತ ಪ್ರದರ್ಶಿಸಿ ಸಂಭ್ರಮಿಸಿದರು. ಆಟಿ ತಿಂಗಳ ವಿಶೇಷತೆ, ಸಂಪ್ರದಾಯ ಹಾಗೂ ಆಹಾರ ಪದ್ಧತಿಗಳ ಕುರಿತು ಒಂದು ದಿನದ ಕಾರ್ಯಕ್ರಮದಲ್ಲಿ ಮಾಹಿತಿ ಪಡೆದು, ವಿವಿಧ ಆಟಿ ತಿಂಗಳ ಸಾಂಪ್ರದಾಯಿಕ ತಿಂಡಿ–ತಿನಿಸುಗಳನ್ನು ಸವಿದರು.
ಶಾಲಾ ಆಡಳಿತ ಮಂಡಳಿ ಸದಸ್ಯೆ ಗೀತಾ ವಾಗ್ಲೆ, ಮುಖ್ಯೋಪಾಧ್ಯಾಯ ರಾಘವೇಂದ್ರ ಸಾಲ್ಯಾನ್, ಪ್ರಕಾಶ್ ಪಾಲಮೆ, ಸುರೇಶ್ ಪೂಜಾರಿ, ರಕ್ಷಕ–ಶಿಕ್ಷಕ ಸಂಘದ ಅಧ್ಯಕ್ಷ ನಿತ್ಯಾನಂದ ಆಚಾರ್ಯ, ಸಂಘದ ಸದಸ್ಯರು, ಸ್ಕೌಟ್ಸ್ ಸದಸ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.















