ಉಡುಪಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ನಾರ್ತ್ ಶಾಲೆಯಲ್ಲಿ ಹಳೇ ವಿದ್ಯಾರ್ಥಿ ಮತ್ತು ಶಾಲಾಭಿವೃದ್ಧಿ ಸಮಿತಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಆದಿತ್ಯವಾರದಂದು ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಉಚಿತ ನೋಂದಣಿ ಹಾಗೂ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆಧಾರ್ ಜೋಡಣೆ ಕಾರ್ಯಕ್ರಮವನ್ನು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ತೆಂಕಪೇಟೆ ವಾರ್ಡ್ ನಗರಸಭಾ ಸದಸ್ಯೆ ಮಾನಸ ಪೈ, ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶ್ರೀದೇವಿ, ಕಾರ್ಯದರ್ಶಿ ಮಹೇಶ್ ನಾಯಕ್, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.












