ಮಂಗಳೂರು: ಹಿಂದೂ ದೇವರಿಗೆ ನಿಂದಿಸಿದ ಆರೋಪದಡಿ ತೊಕ್ಕೊಟ್ಟು ನಿವಾಸಿ ಉದ್ಯಮಿಯನ್ನು ಉಳ್ಳಾಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಸ್ವಾಲಿಝ್ ಇಕ್ಬಾಲ್ ಬಂಧಿತ. ಈತ ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಆಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಯವರು ಬಂಟ್ವಾಳ ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈತ ಫರ್ನಿಚರ್ ಅಂಗಡಿ ಸಹಿತ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದನು. ಚಾಮುಂಡೇಶ್ವರಿ ದೇವಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದನು ಎನ್ನಲಾಗಿದೆ.