ಉಡುಪಿ: ಈ ಹಿಂದೆ ಉಡುಪಿ ನಗರಸಭೆ ಪೌರಾಯುಕ್ತರಾಗಿದ್ದ ಮಂಜುನಾಥಯ್ಯ ಅವರ ಮಣಿಪಾಲ ನಿವಾಸದ ಫ್ಲ್ಯಾಟ್ ಮೇಲೆ ಎಸಿಬಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮೂಲ ಶಿಕ್ಷಣ ಇಲಾಖೆ ಅಧಿಕಾರಿಯಾಗಿದ್ದ ಮಂಜುನಾಥಯ್ಯ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ರಾಜಕೀಯ ಪ್ರಭಾವ ಬಳಸಿ ಉಡುಪಿ ನಗರಸಭೆ ಪೌರಾಯುಕ್ತ ಸ್ಥಾನದಲ್ಲಿ ಖಾಯಂ ಟಿಕಾಣಿ ಹೂಡಿದ್ದರು. ವಿಧಾನಸಭೆ ಚುನಾವಣೆ ಬಳಿಕ ಇತ್ತೀಚಿಗೆ ಶಿಕ್ಷಣ ಇಲಾಖೆ ನಿಯುಕ್ತಿಗೊಳಿಸಲಾಗಿತ್ತು. ಮಂಗಳೂರು ಶಿಕ್ಷಣ ಇಲಾಖೆಯೊಂದರ ಅಧಿಕಾರಿಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತಿದ್ದಾರೆ.