ಎಸಿಬಿ ಯಿಂದ ಅಹವಾಲು ಸ್ವೀಕಾರ

ಉಡುಪಿ, ಜೂನ್ 27: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಜೂನ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಜೂನ್ 29 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಇದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷ ತೋರಿದ್ದಲ್ಲಿ ಮತ್ತು ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿದಿದ್ದಾರೆ.