ಉಡುಪಿ: ಮಣಿಪಾಲ–ಪೆರಂಪಳ್ಳಿ ರಸ್ತೆಯಲ್ಲಿ ಕೆಂಪು ಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಟಿಪ್ಪರ್ ರಸ್ತೆ ವಿಭಜಕದ ಮೇಲೆ ಏರಿದೆ. ಕಾರು ಜಖಂಗೊಂಡಿದೆ.
ಅಪಘಾತದ ವೇಳೆ ಟಿಪ್ಪರ್ನಲ್ಲಿದ್ದ ಕೆಂಪು ಕಲ್ಲುಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಬಳಿಕ ರಸ್ತೆಯ ಮೇಲಿದ್ದ ಕಲ್ಲುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.















