ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ‘ಸಾಧನಾ ಪ್ರಶಸ್ತಿ’

ಮಂಗಳೂರು: ಎಸ್.ಕೆ. ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. 2024-2025ನೇ ಸಾಲಿನಲ್ಲಿ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಹಾಗೂ ಬ್ಯಾಂಕಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ಸಹಕಾರಿ ಸಂಸ್ಥೆ ಎಂದು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಮಹಾಸಭೆಯಂದು ಶನಿವಾರ ‘ಸಾಧನಾ ಪ್ರಶಸ್ತಿ’ ಪಡೆಯಿತು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಂಸ್ಥೆಯ ಅಧ್ಯಕ್ಷ ಪಿ.ಉಪೇಂದ್ರ ಆಚಾರ್ಯ ಮತ್ತು ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಸಂಸ್ಥೆಯ ನಿರ್ದೇಶಕರು ಉಪಸ್ಥಿತರಿದ್ದರು.