ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಎಸ್‌ಎಂಎಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಬ್ರಹ್ಮಾವರ: ಧಾರವಾಡದ ಜೆಎಸ್‌ಎಸ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಫ್ರೀಸ್ಟೈಲ್ ಕುಸ್ತಿ ಪಂದ್ಯಾವಳಿಯಲ್ಲಿ ಬ್ರಹ್ಮಾವರದ ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾಲೇಜಿನ ಅನನ್ಯಾ ಆರ್. ಹೆಗ್ಡೆ ಅವರು 68 ಕೆ.ಜಿ. ವಿಭಾಗದ ಫ್ರೀಸ್ಟೈಲ್ ಕುಸ್ತಿಯಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ. ಶರಣ್ ಅವರು 97 ಕೆ.ಜಿ. ವಿಭಾಗದಲ್ಲಿ ಹಾಗೂ ಸುಕನ್ಯಾ ಅವರು 76 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದಲ್ಲದೆ, ಕಾಲೇಜಿನ ಶ್ರೀ ಸಾಯಿ ಸುಮುಖ, ಮಂದಾರ, ಮೆರಿಲ್ ಪ್ರಿಯಾ ಡಯಾಸ್, ಶ್ರೀಕರ್, ನಂದನ್ ಡಿ.ಕೆ. ಹಾಗೂ ರಂಜನ್ ಅವರು ಕೂಡ ರಾಜ್ಯಮಟ್ಟದ ಈ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕಾಲೇಜನ್ನು ಪ್ರತಿನಿಧಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.