ಉಡುಪಿ: ಮಾಸ್ಕ್ ಧರಿಸದ ನಿಯಮ ಉಲ್ಲಂಘಿಸುವ ಬಸ್‌ಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚನೆ ನೀಡಿದ್ದಾರೆ.
ಬಸ್ಸುಗಳಲ್ಲಿ ಚಾಲಕರು, ನಿರ್ವಾಹಕರು ಹಾಗೂ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಇರುವ ಪ್ರಯಾಣಿಕರಿಗೆ ಬಸ್ ಗಳಲ್ಲಿ ಪ್ರವೇಶ ನೀಡಬಾರದು. ಒಂದು ವೇಳೆ ಬಸ್‌ಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸದಿರುವುದು ಕಂಡು ಬಂದಲ್ಲಿ ಬಸ್ಸುಗಳ ಪರವಾನಿಗೆಯನ್ನು ರದ್ದು ಮಾಡಲಾಗುವುದು ಹಾಗೂ ಸಂಬಂಧಪಟ್ಟ ಬಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.