ಉಡುಪಿ ಜೂನ್ 16: ಜಿಲ್ಲೆಯಲ್ಲಿ ಜ್ವರ ಶೀತ ಕೆಮ್ಮು ರೋಗಿಗಳಿಗೆ ವೈದ್ಯರ ಸಲಹಾ ಚೀಟಿಯಿಲ್ಲದೇ ಯಾವುದೇ ಮೆಡಿಕಲ್ ಶಾಪ್ ಗಳಲ್ಲಿ ಔಷಧ ವಿತರಿಸದಂತೆ ಈಗಾಗಲೇ ಸೂಚಿಸಲಾಗಿದ್ದು, ವೈದ್ಯರ ಚೀಟಿಯಿಲ್ಲದೇ ಮಾರಾಟ ಮಾಡಿದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.
ಜಿಲ್ಲೆಯ ಎಲ್ಲಾ ಮೆಡಿಕಲ್ ಶಾಪ್ ಗಳು ಪ್ರತಿದಿನ ತಮ್ಮಲ್ಲಿ ಮಾರಾಟವಾದ ಔಷಧಗಳ ವಿವರ ನೀಡುವಂತೆ ಸೂಚನೆ ನೀಡಲಾಗಿದ್ದು, ಹಲವು ಮೆಡಿಕಲ್ ಶಾಪ್ ಗಳು ಪ್ರತಿದಿನ ವರದಿ ನೀಡದೇ ಇರುವುದು ಗಮನಕ್ಕೆ ಬಂದದ್ದು, ಎಲ್ಲರೂ ಕಡ್ಡಾಯವಾಗಿ ಪ್ರತಿದಿನದ ವರದಿ ನೀಡುವಂತೆ, ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ.












