ಬೆಂಗಳೂರು: ಕನ್ನಡದ ನಟ ಹಾಗೂ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ಅವರ ಪುತ್ರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸೂರ್ಯೋದಯ ಪುತ್ರ ಮಯೂರ್ (20) ಬೆಂಗಳೂರಿನ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕಿನಲ್ಲಿ ತೆರಳಿತ್ತಿರುವಾಗ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟ ಸೂರ್ಯೋದಯ ಅವರು ಮೂಲತಃ ಉಡುಪಿ ಜಿಲ್ಲೆಯ ಪೆರಂಪಳ್ಳಿ ಅವರಾಗಿದ್ದು. ದೇಯಿ ಬೈದೆತಿ ಎಂಬ ಐತಿಹಾಸಿಕ ತುಳು ಚಿತ್ರವನ್ನು ನಿರ್ಮಾಣ ಮಾಡುವುದರ ಜತೆಗೆ ನಿರ್ದೇಶನ ಹಾಗೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ದರ್ಶನ್ ಅಭಿನಯದ ಕಿಟ್ಟಿ ಚಿತ್ರ ಸಹಿತ ಹಲವಾರು ಚಿತ್ರಗಳಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆ ಕನ್ನಡದ ಗಂಗೋತ್ರಿ ಸಹಿತ ಹಲವು ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ.