ಪುಣ್ಯಕೋಟಿ ದತ್ತು ಸ್ವೀಕಾರ ಯೋಜನೆಗೆ ನಟ ಕಿಚ್ಚ ಸುದೀಪ್ ರಾಯಭಾರಿ

ಬೆಂಗಳೂರು: ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ, ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ಸರ್ಕಾರದ ಮಹತ್ವಾಕಾಂಕ್ಷೆಯ ಪುಣ್ಯಕೋಟಿ ದತ್ತು ಯೋಜನೆಗೆ ಸುಪ್ರಸಿದ್ಧ ನಟ ಕಿಚ್ಚ ಸುದೀಪ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಈ ಬಗ್ಗೆ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

“ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ – ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ “ಪುಣ್ಯಕೋಟಿ ಯೋಜನೆ”ಯ ರಾಯಭಾರಿಯಾದ ಸುಪ್ರಸಿದ್ಧ ನಟ, ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು”.

“ಗೋ ಸಂಪತ್ತಿನ ರಕ್ಷಣೆಯ ಪುಣ್ಯಕಾರ್ಯಕ್ಕೆ ಕೈಜೋಡಿಸಿರುವ ಅವರಿಗೆ ಪುಣ್ಯಕೋಟಿಯ ಆಶೀರ್ವಾದ ಸದಾ ಇರಲಿ ಎಂದು ಹಾರೈಸುವೆ” ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಮಾಹಿತಿ: ಪ್ರಭು.ಬಿ.ಚವ್ಹಾಣ್/ ಟ್ವಿಟರ್