ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ‘ಅಪ್ಪು’ ಖ್ಯಾತಿಯ ಪವರ್ ಸ್ಟಾರ್  ಪುನೀತ್ ರಾಜ್‌ಕುಮಾರ್ (46) ಇಂದು ಹೃದಯಾಘಾತದಿಂದ ನಿಧನ ಹೊಂದಿದರು.

ಇಂದು (ಅ.29) ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಅಲ್ಲೇ ಕುಸಿದು ಬಿದ್ದಿದ್ದರು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‌ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.

ಅಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ವಿಷಯ ತಿಳಿದ ಕೂಡಲೇ ಪುನೀತ್‌ರನ್ನು  ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುನೀತ್ ಅವರಿಗೆ ತಜ್ಞ ವೈದ್ಯರ ತಂಡ ತೀವ್ರ ನಿಗಾ ಘಟಕದಲ್ಲಿ ತುರ್ತು ಚಿಕಿತ್ಸೆ ನೀಡಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ