ನಟ ಪುನೀತ್ ರಾಜ್​​ಕುಮಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್​​ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸದ್ಯ ವಿಕ್ರಂ ಆಸ್ಪತ್ರೆಯ ಪ್ರಮುಖ ವೈದ್ಯರು ಪುನೀತ್ ರಾಜ್​​ಕುಮಾರ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಇಂದು ಬೆಳಗ್ಗೆ ವೇಳೆಗೆ ಹಠಾತ್ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೊನ್ನೆಯಷ್ಟೇ ಪುನೀತ್, ಡಾ.ಶಿವರಾಜ್​ಕುಮಾರ್ ಅಭಿನಯದ ಭಜರಂಗಿ ಚಿತ್ರದ ಪ್ರಮೋಷನ್​​ನಲ್ಲಿ ಬ್ಯುಸಿ ಆಗಿದ್ದರು.