ಬೆಂಗಳೂರು: ಕನ್ನಡ ಚಿತ್ರ ನಟ ಚಿನ್ನಾರಿ ಮುತ್ತ ಖ್ಯಾತಿಯ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂಧ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007 ರಲ್ಲಿ ಆಗಸ್ಟ್ 26 ರಂದು ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಾಗಲೆ ಈ ದುರಂತ ನಡೆದಿದೆ.

















