ಚೆನ್ನೈ: ನಟಿ, ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಖುಷ್ಬೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರು ತಮಿಳುನಾಡಿನ ಕಡಲೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಘಟನೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಖುಷ್ಬೂ ಅವರು, ನಿಮ್ಮೆಲ್ಲರ ಆಶೀರ್ವಾದ ಹಾಗೂ ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನಾನು ಪ್ರಯಾಣಿಸುತ್ತಿದ್ದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನನ್ನ ಪತಿ ನಂಬಿರುವ ದೇವರು ಮುರುಗನ್ ನಮ್ಮನ್ನು ಬದುಕಿಸಿದ ಎಂದು ಹೇಳಿಕೊಂಡಿದ್ದಾರೆ.
ನಮ್ಮ ಕಾರು ಸರಿಯಾದ ಮಾರ್ಗದಲ್ಲಿಯೇ ಸಾಗುತ್ತಿತ್ತು. ಆದರೆ, ಇದ್ದಕ್ಕಿದ್ದಂತೆ ಎಲ್ಲಿಂದಲೋ ಬಂದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆಯಿತು ಎಂದು ತಿಳಿಸಿದ್ದಾರೆ.